ಮನೆ ರಾಜ್ಯ ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ಆಚರಣೆ: ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ, ಸಂವಿಧಾನ ಪುಸ್ತಕ ವಿತರಣೆ

ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ಆಚರಣೆ: ಕಾಯಕಯೋಗಿಗಳಿಗೆ ಬಸವಶ್ರೀ ಪುರಸ್ಕಾರ, ಸಂವಿಧಾನ ಪುಸ್ತಕ ವಿತರಣೆ

0

ಮಂಡ್ಯ: ಕರ್ನಾಟಕ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರ ಹುಟ್ಟು ಹಬ್ಬದ ಅಂಗವಾಗಿ ಮಂಡ್ಯ ನಗರದ ಕರ್ನಾಟಕ ಸಂಘದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅವಿಸ್ಮರಣೆಯ ಸೇವೆ ಸಲ್ಲಿಸಿರುವ ಕಾಯಕಯೋಗಿಗಳಿಗೆ ‘ಬಸವಶ್ರೀ’ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಸಂವಿಧಾನ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Whatsapp Group

ಸಂವಿಧಾನ ಪೀಠಿಕೆ ಓದುವ ಮೂಲಕ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಸೀಫ್ ಅಹಮದ್ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಪ್ರಿಯಾಂಕ ಖರ್ಗೆ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಕಾರ್ಯಕ್ರಮದ ಆಯೋಜಕರನ್ನು ಅಭಿನಂದಿಸಿದರು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಸುಂಡಹಳ್ಳಿ ಮಂಜುನಾಥ್ ಪ್ರಾಸ್ತಾವಿಕವಾಗಿ  ಮಾತನಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾಯಕದಲ್ಲಿ ನಂಬಿಕೆಯಿರಿಸಿಕೊಂಡು ಕಾರ್ಯೋನ್ಮುಖರಾಗಿರುವುದರಿಂದ ಅವರ ಹುಟ್ಟುಹಬ್ಬದಂದು ಕಾಯಕಯೋಗಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.

ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಡಾ. ನರಸಿಂಹಸ್ವಾಮಿ, ಟಿವಿ 5  ವರದಿಗಾರ ಡಿ ಶಶಿಕುಮಾರ್, ಪಿ ಇ ಎಸ್ ಕಾನೂನು ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪಿ ಡಿ ತಿಮ್ಮಪ್ಪ, ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕಿ ಶ್ರೀಮತಿ ಉಷಾರಾಣಿ, ಡಾ. ಕೆ ಶಬಾನ ಹಾಗೂ ಚಲನಚಿತ್ರ ಯುವ ನಿರ್ಮಾಪಕ ಅಖಿಲೇಶ್ ಅವರಿಗೆ ‘ಬಸವ ಶ್ರೀ’ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಳ್ಳಿ ಅಶೋಕ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಹಿಮ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಚ್.ನಾಗರಾಜು, ನಗರಸಭಾ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಮುಜಾಹಿದ್ ಅಲಿಖಾನ್ ಭಾಗವಹಿಸಿದ್ದರು.