ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ.
ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಇಂದು (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ.