ಮನೆ ರಾಜ್ಯ ಬಂಡವಾಳಶಾಹಿಗಳ ಪರವಾದ ಬಜೆಟ್‌: ಬಡಗಲಪುರ ನಾಗೇಂದ್ರ

ಬಂಡವಾಳಶಾಹಿಗಳ ಪರವಾದ ಬಜೆಟ್‌: ಬಡಗಲಪುರ ನಾಗೇಂದ್ರ

0

ಮೈಸೂರು(Mysuru): 2023–24ನೇ ಸಾಲಿನ ಕೇಂದ್ರ ಬಜೆಟ್‌ ಬಡವರು, ಮಧ್ಯಮ ವರ್ಗದವರು, ರೈತರು, ಕೂಲಿ ಕಾರ್ಮಿಕರಿಗೆ ಯಾವುದೇ ಅನುಕೂಲವಿಲ್ಲ. ಕೃಷಿಗೆ ಉತ್ತೇಜಿಸುವ ಕಾರ್ಯಕ್ರಮದ ಬದಲು ಬಂಡವಾಳಶಾಹಿಗಳ ಪರವಾದ ಬಜೆಟ್‌ ಇದಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,2023–24ನೇ ಸಾಲಿನ ಕೇಂದ್ರ ಬಜೆಟ್‌ ಕೃಷಿ ವಿರೋಧಿಯಾಗಿದ್ದು, ಕಾರ್ಪೊರೇಟ್‌ ಶಕ್ತಿಗಳ ಪರವಾಗಿದೆ ಎಂದು ಆರೋಪಿಸಿದರು.

ಕೃತಕ ಬುದ್ಧಿಮತ್ತೆಯನ್ನು ಕೃಷಿ ಕ್ಷೇತ್ರಕ್ಕೆ ಅಳವಡಿಸುವುದಾಗಿ ಬಜೆಟ್‌ ಭಾಷಣದಲ್ಲಿ ಹಣಕಾಸು ಸಚಿವೆ ಹೇಳಿದ್ದಾರೆ. ಆದರೆ, ಈ ತಂತ್ರಜ್ಞಾನದಿಂದ ಈಗಾಗಲೇ ಹತ್ತಿ ಬೆಳೆಗಾರರಿಗೆ ತೊಂದರೆಯಾಗಿದೆ. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ‍ತಂತ್ರಜ್ಞಾನ ಅವಳವಡಿಕೆ ಮಾಡಬಾರದು ಎಂದು ತಿಳಿಸಿದರು.

ಭಾರತೀಯ ರೈತರು ಬುದ್ಧಿವಂತರು. ಅವರಿಗೆ ಪರಿಸರ ಹಾಗೂ ಪಾರಂಪರಿಕ ಜ್ಞಾನ ಹೆಚ್ಚಿದೆ. ದುಡಿಯುವ ಕೈಗಳಿಗೆ ಕೆಲಸ ನೀಡುವ ದೂರದೃಷ್ಟಿಯ ಯೋಜನೆಗಳು ಬಜೆಟ್‌’ನಲ್ಲಿಲ್ಲ. ಎಂದು ವಿಶ್ಲೇಷಿಸಿದರು.

ಕೃಷಿ ಕ್ಷೇತ್ರಕ್ಕೆ ₹ 20 ಲಕ್ಷ ಕೋಟಿ ಅನುದಾನ ನೀಡಲಾಗುವುದೆಂದು ಹೇಳಿದ್ದಾರೆ. ಅದು ಏನೇನೂ ಸಾಲದು. ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಹಿಂದಿನ ಲೇಖನಸಕಳ್ಳಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಂದ ಭೂಮಿ ಪೂಜೆ
ಮುಂದಿನ ಲೇಖನರಾಘವೇಂದ್ರ ರಾಘವೇಂದ್ರ