ಮನೆ ಸ್ಥಳೀಯ ಹಿಂದೂ ಪರ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿಗೆ’ ಕೊಲೆ ಬೆದರಿಕೆ!

ಹಿಂದೂ ಪರ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿಗೆ’ ಕೊಲೆ ಬೆದರಿಕೆ!

0

ಮೈಸೂರು: ಮೈಸೂರು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಜೀವಬೆದರಿಕೆ ಹಾಕಲಾಗಿದೆ. ಈ ಕುರಿತಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಉದಯಗಿರಿ ನಿವಾಸಿ ಅಕ್ರಮ್ ಖಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಗೋವು ಸಾಗಾಣಿಕೆ ವೇಳೆ ಇದ್ರಿಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಹಿಂದೂಪರ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್​​ ಕೆರೆಹಳ್ಳಿ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿತ್ತು. ಬಳಿಕ 2023 ಮೇ ತಿಂಗಳಿನಲ್ಲಿ  ಹೈಕೋರ್ಟ್‌ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಈ ಬಗ್ಗೆ ಸೊಶೀಯಲ್​​ ಮೀಡಿಯಾದಲ್ಲಿ ವಿಡಿಯೋ ಕೂಡ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರು.

ಆದರೆ ವಾಹನದಲ್ಲಿದ್ದ ಇದ್ರೀಷ್ ಪಾಷ ಮೃತ ದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ ಮಾಡಿದ್ದು, ಇದ್ರಿಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ, Next You ಎಂದು ಬೆದರಿಕೆ ಹಾಕಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.