ಮನೆ ರಾಜ್ಯ ಪಾಕ್ ಪರ ಘೋಷಣೆ ಪ್ರಕರಣ: FSL ವರದಿ ಬಹಿರಂಗ- ಆರೋಪಿ ಬಂಧನಕ್ಕೆ ತಯಾರಿ

ಪಾಕ್ ಪರ ಘೋಷಣೆ ಪ್ರಕರಣ: FSL ವರದಿ ಬಹಿರಂಗ- ಆರೋಪಿ ಬಂಧನಕ್ಕೆ ತಯಾರಿ

0

ಬೆಂಗಳೂರು:  ಇಡೀ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದ್ದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆಯ ಎಫ್​ ಎಸ್​ ಎಲ್ ವರದಿ ಹೊರ ಬಿದ್ದಿದ್ದು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ.

ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. FSL​ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.

ಎಫ್ ಎಸ್​ ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

ಎಫ್ ​ಎಸ್​ ಎಲ್ ​ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.