ಮನೆ ರಾಜ್ಯ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ

0

ಬೆಂಗಳೂರು: ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದ್ದಾರೆ.

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಡಾ. ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿದೆ. ಹೀಗಾಗಿ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

19 ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ.ಪುರುಷೋತ್ತ ಬಿಳಿ ಮಲೆ ಅಧ್ಯಕ್ಷರಾದರೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನೇಮಕಗೊಂಡವರು

ಕನ್ನಡ ಪುಸ್ತಕ ಪ್ರಾಧಿಕಾರ: ಅಧ್ಯಕ್ಷರು ಮೈಸೂರು ಮಾನಸ

ಕರ್ನಾಟಕ ಸಾಹಿತ್ಯ ಅಕಾಡೆಮಿ: ಎಲ್ ಎನ್ ಮುಕುಂದರಾಜ್​​

ಕರ್ನಾಟಕ ನಾಟಕ ಅಕಾಡೆಮಿ: ಕೆವಿ ನಾಗರಾಜಮೂರ್ತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಕೃಪಾ ಫಡಕಿ

ಕರ್ನಾಟಕ ಶಿಲ್ಪ ಕಲಾ ಅಕಾಡಮಿ: ಎಂಸಿ ರಮೇಶ್

ಲಲಿತ ಕಲಾ ಅಕಾಡಮಿ: ಡಾ.ಪಸ ಕುಮಾರ್

ಯಕ್ಷಗಾನ ಅಕಾಡೆಮಿ: ತಲ್ಲೂರು ಶಿವರಾಂ ಶೆಟ್ಟಿ

ಜಾನಪದ ಅಕಾಡೆಮಿ: ಶಿವ ಪ್ರಸಾದ್ ಗೊಲ್ಲಹಳ್ಳಿ

ತುಳು ಸಾಹಿತ್ಯ ಅಕಾಡೆಮಿ: ತಾರಾನಾಥ ಗಟ್ಟಿ ಕಾಪಿಕಾಡ್

ಕೊಂಕಣಿ ಸಾಹಿತ್ಯ ಅಕಾಡೆಮಿ: ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್

ಬ್ಯಾರಿ ಸಾಹಿತ್ಯ ಅಕಾಡೆಮಿ: ಉಮರ್ ಯು ಎಚ್

ಅರೆ ಭಾಷಾ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ: ಸದಾನಂದ ಮಾವಜಿ

ಬಯಲಾಟ ಅಕಾಡೆಮಿ: ದುರ್ಗದಾಸ್

ಬಂಜಾರ ಅಕಾಡೆಮಿ: ಡಾಕ್ಟರ್‌ ಎಂ ಆರ್ ಗೋವಿಂದಸ್ವಾಮಿ

ರಂಗ ಸಮಾಜ: ಡಾ.ರಾಮಕೃಷ್ಣಯ್ಯ

ಕೊಡವ ಸಾಹಿತ್ಯ ಅಕಾಡೆಮಿ: ಅಜ್ಜಿನಕೊಂಡ ಮಹೇಶ್