ಮನೆ ಕಾನೂನು ಕಾನೂನು ಕಾರ್ಯದರ್ಶಿಗೆ ನ್ಯಾಯಮೂರ್ತಿಗಳಾಗಿ ಬಡ್ತಿ

ಕಾನೂನು ಕಾರ್ಯದರ್ಶಿಗೆ ನ್ಯಾಯಮೂರ್ತಿಗಳಾಗಿ ಬಡ್ತಿ

0

ನವದೆಹಲಿ : ಇದೇ ಮೊದಲ ಬಾರಿಗೆ ಕೇಂದ್ರ ಕಾನೂನು ಕಾರ್ಯದರ್ಶಿ ಅನೂಪ್​ ಕುಮಾರ್​ ಮೆಂಡಿರಟ್ಟಾ ಅವರನ್ನು ದೆಹಲಿ ಹೈಕೋರ್ಟ್​ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಕೇಂದ್ರ ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯ ಪ್ರಕಾರ, ಕೇಂದ್ರ ಕಾನೂನು ಕಾರ್ಯದರ್ಶಿ ಅನೂಪ್‌ಕುಮಾರ್ ಮೆಂಡಿರಟ್ಟಾ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ನೀಡಲಾಗಿದೆ.ಮೆಂಡಿರಟ್ಟಾ ಅವರು 2019ರಲ್ಲಿ ದೆಹಲಿ ಕಾನೂನು ಕಾರ್ಯದರ್ಶಿಯಾದಾಗ ನ್ಯಾಯಾಂಗ ಅಧಿಕಾರಿಯಾಗಿಯೂ ಕೆಲಸ ಮಾಡಿದ್ದರು. ಅಲ್ಲದೇ, ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಧೀಶರನ್ನು ಕೇಂದ್ರ ಕಾನೂನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದೂ ಕೂಡ ಇದೇ ಮೊದಲಾಗಿದೆ ಎಂದು ತಿಳಿಸಿದೆ.

Advertisement
Google search engine

ಮೆಂಡಿರಟ್ಟಾ ಅವರ ಜೊತೆಗೆ ಇನ್ನು ಮೂವರು ನ್ಯಾಯಾಂಗ ಅಧಿಕಾರಿಗಳಾದ ನೀನಾ ಬನ್ಸಾಲ್ ಕೃಷ್ಣ, ದಿನೇಶ್ ಕುಮಾರ್ ಶರ್ಮಾ ಮತ್ತು ಸುಧೀರ್ ಕುಮಾರ್ ಜೈನ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ.

ಹಿಂದಿನ ಲೇಖನಎನ್ ಎಸ್ ಇ ಪ್ರಕರಣ: ಮಾಜಿ ಎಂಡಿ ಚಿತ್ರಾ ರಾಮಕೃಷ್ಣ ಸಲಹೆಗಾರ ಆನಂದ್ ಸುಬ್ರಮಣಿಯನ್ ಬಂಧನ
ಮುಂದಿನ ಲೇಖನಮೇಕೆದಾಟು ಪಾದಯಾತ್ರೆ: ಚಲನಚಿತ್ರ ಕಲಾವಿದರ ಬೆಂಬಲಕ್ಕೆ ಕಾಂಗ್ರೆಸ್ ಮನವಿ