ಬೆಂಗಳೂರು : ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಸಂಬಂಧ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಾರ್ಮಿಕರ ಕೆಲಸ ಅವಧಿಯನ್ನು 8ಗಂಟೆಯಿಂದ 10 ಗಂಟೆಗೆ ಹೆಚ್ಚಳ ಮಾಡುವ ಪ್ರಸ್ತಾವ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು,ಕಾರ್ಮಿಕ ವರ್ಗದ ಹಿತರಕ್ಷಣೆಗೆ ನಮ್ಮ ಆದ್ಯತೆ. ಯಾವುದೇ ಸಂದರ್ಭದಲ್ಲಿಯೂ ಕಾರ್ಮಿಕರಿಗೆ ಅನಾನುಕೂಲ ಆಗುವಂತಹ ಯಾವುದೇ ತೀರ್ಮಾನಗಳನ್ನು ಸರಕಾರ ಕೈಗೊಳ್ಳುವುದಿಲ್ಲ ಎಂದು ವಿವರಣೆ ನೀಡಿದ್ದಾರೆ.
ಖಾಸಗಿ ವಲಯದ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 10 ಗಂಟೆಗೆ ಹೆಚ್ಚಳದ ಕುರಿತು ಕೇಂದ್ರ ಸರಕಾರದ ಪ್ರಸ್ತಾವ ಚರ್ಚೆಯ ಹಂತದಲ್ಲಿದೆ. ಈ ಬಗ್ಗೆ ಕಾರ್ಮಿಕ ಸಂಘಟನೆಗಳ ಮುಖಂಡರು, ಕೈಗಾರಿಕೆ ಪ್ರತಿನಿಧಿಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.














