ಮನೆ ರಾಜಕೀಯ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ವಿಚಾರ: ಶಾಸಕ ಎನ್.ಹೆಚ್. ಕೋನರೆಡ್ಡಿ ಕಿಡಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ವಿಚಾರ: ಶಾಸಕ ಎನ್.ಹೆಚ್. ಕೋನರೆಡ್ಡಿ ಕಿಡಿ

0

ಧಾರವಾಡ”ಸಿಎಂ ಸಿದ್ದರಾಮಯ್ಯನವರನ್ನು ಮುಟ್ಟಿದ್ರೆ ಬಿಜೆಪಿ ಸತ್ಯನಾಶವಾಗುತ್ತದೆ” ಎಂದು ಶಾಸಕ ಎನ್.ಹೆಚ್. ಕೋನರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದರು.

Join Our Whatsapp Group

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಚುನಾಯಿತ ಸರ್ಕಾರವನ್ನು ಹೀಗೆ ತೆಗೆದುಹಾಕಲು ಆಗುವುದಿಲ್ಲ. ಎಸ್.ಆರ್. ಬೊಮ್ಮಾಯಿ ಪ್ರಕರಣದ ತೀರ್ಪು ಇದೆ. ಆದ್ರೂ ಇಂತಹ ದುಸ್ಸಾಹಸಕ್ಕೆ ಬಿಜೆಪಿ ಕೈಹಾಕಬಾರದಿತ್ತು” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

”ಕಾನೂನು ತಜ್ಞರು ಇಂತಹ ಅವಶ್ಯಕತೆ ಇರಲಿಲ್ಲ ಅಂತಾ ಹೇಳಿದ್ದಾರೆ. ರಾಜ್ಯಪಾಲರಿಗೂ ಪ್ರಾಸಿಕ್ಯೂಷನ್ ಕೊಡುವ ಮನಸ್ಸಿರಲಿಲ್ಲ. ಆದರೆ, ಕೇಂದ್ರದ ಒತ್ತಡಕ್ಕೆ ಮಣಿದು ಅನುಮತಿ ಕೊಟ್ಟಿರಬಹುದು. ನಾವು ಈ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸಂಪುಟ ಸಭೆಯಲ್ಲಿ ಒಂದು ನಿರ್ಣಯ ಪಾಸ್ ಮಾಡಿದ್ದೇವೆ. ಮೈಸೂರು ಜನಾಂದೋಲದಲ್ಲಿಯೇ 136 ಶಾಸಕರು ಸಿದ್ದರಾಮಯ್ಯನವರೇ ಸಿಎಂ ಎಂದು ತೀರ್ಮಾನ ಮಾಡಿದ್ದೇವೆ” ಎಂದರು.

”9 ಸಂಸದರು, ಎಂಎಲ್‌ಸಿ, ರಾಜ್ಯಸಭಾ ಸದಸ್ಯರು ಪಕ್ಷದ ಹೈಕಮಾಂಡ್​ ಸಹ ಒಪ್ಪಿದ್ದಾರೆ. ರಾಜ್ಯದ ಜನರು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಭಾವನೆ ಹೊಂದಿದ್ದಾರೆ. ಹಿಂಬಾಗಿಲಿನಿಂದ ಬಂದು ಸಿದ್ದರಾಮಯ್ಯ ಮೇಲೆ ಕ್ರಮಕ್ಕೆ ಪ್ರಯತ್ನಿಸಬೇಡಿ. ಹಾಗೇನಾದ್ರೂ ಮಾಡಿದ್ರೆ, ಬಿಜೆಪಿ ಹೇಳ ಹೆಸರಿಲ್ಲದಂತೆ ಆಗುತ್ತದೆ. ಸಿದ್ದರಾಮಯ್ಯ ಯಾವತ್ತಿದ್ರೂ ಸಿದ್ದರಾಮಯ್ಯನೇ ಇಡೀ ರಾಜ್ಯದ ಜನತೆಗೆ ಗ್ಯಾರಂಟಿ ಕೊಟ್ಟಿದ್ದಾರೆ. ಜನ ದೇವರಂತೆ ಮಾತನಾಡುತ್ತಾರೆ. ಸಿದ್ದರಾಮಯ್ಯನವರನ್ನು ಮುಟ್ಟಿದ್ರೆ ಬಿಜೆಪಿ ಸತ್ಯಾನಾಶ ಆಗುತ್ತದೆ. ತಪ್ಪು ಇದ್ದರೆ ಹೇಳಲಿ? ಸಿದ್ದರಾಮಯ್ಯ ವಿರುದ್ಧ ಮಾತನಾಡುವ ಶಕ್ತಿ ಯಾರಿಗೂ ಇಲ್ಲ. ಅಷ್ಟೊಂದು ಸರಿಯಾದ ಮಾರ್ಗದಲ್ಲಿ ಸಿದ್ದರಾಮಯ್ಯ ಇದ್ದಾರೆ. ಇವತ್ತು ಯಾಕೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ” ಎಂದು ಪ್ರಶ್ನಿಸಿದರು.