ಮೈಸೂರು(Mysuru): ನಗರದ ಹೊರವಲಯದ ಒಂಟಿ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರು ಅಂತಾರಾಜ್ಯ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ಶಾಂತವೇರಿ ಗೋಪಾಲಗೌಡ ಬಡಾವಣೆಯಲ್ಲಿ ಒಂಟಿ ಮನೆಯನ್ನು ಬಾಡಿಗೆ ಪಡೆದು, ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಸ್ಥಳೀಯ ಒಡನಾಡಿ ಸೇವಾ ಸಂಸ್ಥೆಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಿತ್ತು.
ಮಾಹಿತಿ ತಿಳಿದ ತಕ್ಷಣ ದಾಳಿ ನಡೆಸಿದ ಪೊಲೀಸರು ದಂಧೆಯಲ್ಲಿದ್ದ ಪಂಜಾಬ್, ಅಸ್ಸೋಂ ಮತ್ತು ಕರ್ನಾಟಕದವರೂ ಸೇರಿ ಒಟ್ಟು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ 5 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹೊರ ರಾಜ್ಯದಿಂದ ಬರುವ ಜನರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು ಎಂದು ದಾಳಿ ವೇಳೆ ಗೊತ್ತಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.