ಕೊಪ್ಪಳ : ಗಂಗಾವತಿ ನಗರದ ಗಾಂಧಿ ಸರ್ಕಲ್‌ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಪೊಲೀಸರು ಡಿಜೆ ಬಂದ್ ಮಾಡಲು ಮುಂದಾದ ಮೇಲೆ ಯುವಕರು ಪ್ರತಿಭಟನೆಗೆ ಮುಂದಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.
ನಂತರ ಪೊಲೀಸರು ಡಿಜೆ ಬಂದ್ ಮಾಡಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ʻದಲಿತರ ಗಣೇಶ ಹಬ್ಬ ಆಚರಣೆಗೆ ಪೊಲೀಸರಿಂದ ವಿರೋಧʼ ಎಂದು ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದರು. ಆದ್ರೂ ಪ್ರಯೋಜನವಾಗದ ಹಿನ್ನೆಲೆ ಲಘು ಲಾಠಿ ಪ್ರಹಾರ ನಡೆಸಿ, ಪ್ರತಿಭಟನೆ ಚದುರಿಸಿದರು.
ದಲಿತ ಯುವಕ ಸಂಘದವರು ಡಿಜೆ ಬಂದ್ ಮಾಡಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿಕೊಂಡ್ರು, ಡಿಜೆ ಹಾಕುವವರೆಗೂ ಗಣೇಶ ವಿಸರ್ಜನೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಪೊಲೀಸ ಇಲಾಖೆಯ ಅಧಿಕಾರಿಗಳು ಯುವಕರ ಮನವೊಲಿಸಿ, ಡಿಜೆ ಬಂದ್ ಮಾಡಿ, ಗಣೇಶ ವಿಸರ್ಜನೆಗೆ ಕಳುಹಿಸಲಾಯಿತು. ಸ್ಥಳದಲ್ಲಿಯೇ ಎಸ್‌ಪಿ, ಡಿವೈಎಸ್‌ಪಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.















