ಮನೆ ಸುದ್ದಿ ಜಾಲ ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ

0

ಮೈಸೂರು (Mysore): ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಸಂಜೆ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ‘ದೇಶದ್ರೋಹಿಗಳನ್ನು ಬಂಧಿಸಿ’ ಎಂದು ಕೂಗುತ್ತಾ ಮೋಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಯಶಂಕರ್, ಮೈಸೂರು ನಗರ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ, ಪ್ರಧಾನ ಕಾರ್ಯದರ್ಶಿ ಸಂತೋಷ್, ಭರತ್, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್, ಕೃಷ್ಣರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮನು ಶೈವ, ಚಾಮುಂಡೇಶ್ವರಿ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮಧು, ಅರ್ಜುನ್, ಪ್ರಜ್ವಲ್, ನರಸಿಂಹಮೂರ್ತಿ, ಬದ್ರಿಪ್ರಸಾದ್, ಪಂಕಜ್, ಕೀರ್ತಿರಾಜ್ ಪಾಲ್ಗೊಂಡಿದ್ದರು.