ಮನೆ ಅಪರಾಧ ಮೆಟ್ರೋ ಟಿಕೆಟ್​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಮೆಟ್ರೋ ಟಿಕೆಟ್​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್

0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ 16 ಜನ ಕಾರ್ಯಕರ್ತರ ವಿರುದ್ಧ ಕಾಟನ್ ​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಶುಕ್ರವಾರ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

Join Our Whatsapp Group

ಈಗಾಗಲೇ ಮೆಟ್ರೋ ದರ ಏರಿಕೆಯನ್ನು ಜನರು ಖಂಡಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಪ್ರಯಾಣಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದರು. ಬಿಎಂಆರ್​ಸಿಎಲ್ 45% ರಿಂದ 50% ರಷ್ಟು ದರ ಏರಿಕೆ ಮಾಡಿದ್ದೇವೆ ಎಂದು ಹೇಳುತ್ತು. ಆದರೆ, 100% ರಷ್ಟು, ಅಂದ್ರೆ ಒನ್​ ಟು ಡಬಲ್ ಏರಿಕೆಯಾಗಿತ್ತು. ರೈತರು, ಕನ್ನಡಪರ ಹೋರಾಟಗಾರರು,ಪ್ರಗತಿಪರ ಸಂಘಟನೆಗಳು ಮತ್ತು ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರು ಬಿಎಂಆರ್​ಸಿಎಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಇನ್ನು ಮೆಟ್ರೋ ದರ ಯಥೇಚ್ಚಾಗಿ ಏರಿಕೆಯಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶಗೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದರು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ಯಾವ ಯಾವ ಸ್ಟೇಜ್​ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ ಎಂದು ಪರಿಶೀಲಿಸಿ ಕೂಡಲೇ ಕಡಿತಗೊಳಿಸುವಂತೆ ಬಿಎಂಆರ್​ಸಿಎಲ್​ ಗೆ ಸೂಚನೆ ನೀಡಿದ್ದರು.