ಮನೆ ರಾಷ್ಟ್ರೀಯ ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ವಿಪಕ್ಷಗಳಿಂದ ಕಪ್ಪು ಬಟ್ಟೆ, ಪಟ್ಟಿ ಧರಿಸಿ ಪ್ರತಿಭಟನೆ

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ವಿಪಕ್ಷಗಳಿಂದ ಕಪ್ಪು ಬಟ್ಟೆ, ಪಟ್ಟಿ ಧರಿಸಿ ಪ್ರತಿಭಟನೆ

0

ನವದೆಹಲಿ: ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಸಂರಕ್ಷಿಸಲು ಯಾರಾದರೂ ಮುಂದೆ ಬಂದರೆ ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ ಎಂದು ಹೇಳಿದರು.

ಸಮಾನ ಮನಸ್ಕ ವಿಪಕ್ಷಗಳ ಸಂಸದರ ಸಭೆ

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌’ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.

ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.

ಹಿಂದಿನ ಲೇಖನಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ದಾಖಲೆ ಇಲ್ಲದ 49.90 ಲಕ್ಷ ರೂ. ವಶಕ್ಕೆ
ಮುಂದಿನ ಲೇಖನಗಂಡು ಮಗುವಿಗೆ ಜನ್ಮನೀಡಲಿಲ್ಲವೆಂದು ಪತ್ನಿಯ ಮೇಲೆ ಹಲ್ಲೆ: ಪತಿಯ ಬಂಧನ