ಮನೆ ಸುದ್ದಿ ಜಾಲ ಕನಿಷ್ಠ ಕೂಲಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ಕನಿಷ್ಠ ಕೂಲಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

0

ಮೈಸೂರು(Mysuru): ಕನಿಷ್ಟ ಕೂಲಿ ಮತ್ತು ಕೆಲಸದ ಖಾಯಮಾತಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಇಂದು ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಲ್ಲಾಳ್ ವೃತ್ತದ ಬಳಿ ಇರುವ ಬುದ್ಧ ವಿಹಾರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಮಾತನಾಡಿದ ಸಿಐಟಿಯುನ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ,  ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ಕೂಲಿ ವೇತನ ಜಾರಿ ಮಾಡುವಂತೆ ಹಾಗೂ 60 ವರ್ಷದ ನಂತರ ಪಿಂಚಣಿ ಅಥವಾ  2ಲಕ್ಷ ಇಡಿ ಗಂಟನ್ನು ನೀಡಬೇಕೆಂದು ಒತ್ತಾಯಿಸಿದರು.

ಅಕ್ಷರ ದಾಸೋಹದಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಯಾವುದೇ ಆರ್ಥಿಕ ಭದ್ರತೆ ಇಲ್ಲ. ಕನಿಷ್ಠ ಕೂಲಿಯನ್ನು ಸಹ ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಒಂದು ತಿಂಗಳ ಸಂಬಳ ಬರಬೇಕಾದರೆ 3 ತಿಂಗಳವರಗೆ ಕಾಯಬೇಕು ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು. 10000 ರೂ. ಕನಿಷ್ಟ ಕೂಲಿ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷ ಬಾಲಾಜಿ ರಾವ್, ಪ್ರಧಾನ ಕಾರ್ಯದರ್ಶಿ ಜಯರಾಮು, ಜಿಲ್ಲಾ ಕಾರ್ಯದರ್ಶಿ ಮಂಗಳಮ್ಮ, ಕಾರ್ಯದರ್ಶಿ ಮಂಜುಳ ಸೇರಿದಂತೆ ಹಲವು ಪಾಲ್ಗೊಂಡಿದ್ದರು.