ಬೆಳಗಾವಿ: ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆ ವಿಧಾನಸಭೆ ಕಲಾಪ ಮುಂದೂಡಿಕೆ ಮಾಡಲಾಗಿದ್ದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸದಸ್ಯರ ವಿರುದ್ದ ಕಿಡಿಕಾರಿದರು.
ಈ ಬಗ್ಗೆ ಮಾತನಾಡಿದ ಆರ್.ಅಶೋಕ್, ಡಾ.ಬಿಆರ್ ಅಂಬೇಡ್ಕರ್ ಹೇಳಿಕೆ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ. ಅಮಿತ್ ಶಾ ಅವರು ಸ್ಪಷ್ಟನೆ ನೀಡಿದ್ದಾರೆ. ಸಂವಿಧಾನ ಭಗವತ್ಗೀತೆಯಷ್ಟು ಪವಿತ್ರವೆಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಕಾಂಗ್ರೆಸ್ ನವರು ಕುತಂತ್ರ ಮಾಡಿ ಸದನ ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಗರಣದ ಬಣ್ಣ ಬಯಲಾಗುತ್ತೆ ಅಂತಾ ಸದನದ ದಾರಿ ತಪ್ಪಿಸುತ್ತಿದ್ದಾರೆ. ಸದನ ನಡೆಯುವುದಕ್ಕೆ ಸ್ಪೀಕರ್ ಅವಕಾಶ ನೀಡಬೇಕು. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಸರ್ಕಾರ ಉತ್ತರಿಸಬೇಕು ಸರ್ಕಾರ ಉತ್ತರ ನೀಡದಿದ್ದರೇ ಹೋರಾಟ ಮಾಡುತ್ತೇವೆ ಎಂದು ಆರ್.ಅಶೋಕ್ ಹರಿಹಾಯ್ದರು.