ಮನೆ ಅಪರಾಧ ಪಿಎಸ್’ಐ ಅಕ್ರಮ ನೇಮಕಾತಿ: ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ ಬಂಧನ

ಪಿಎಸ್’ಐ ಅಕ್ರಮ ನೇಮಕಾತಿ: ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ ಬಂಧನ

0

ಕಲಬುರಗಿ(Kalburgi): ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬುವವರನ್ನು ಸಿಐಡಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಎಫ್ಐಆರ್ ದಾಖಲಾದ ನಂತರ ನಾಪತ್ತೆಯಾಗಿದ್ದ ರಚನಾರನ್ನು ಕಳೆದ ಮೂರುವರೆ ತಿಂಗಳಿಂದ ಬೆಂಗಳೂರು ಹಾಗೂ ಕಲಬುರಗಿ ಸಿಐಡಿ ಅಧಿಕಾರಿಗಳು ಹುಡುಕುತ್ತಿದ್ದರು.

ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್‌ ಇನ್‌ಸ್ಪೆಕ್ಟರ್ ಬಸವರಾಜ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಶನಿವಾರ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.

ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದರು.