ಬೆಂಗಳೂರು(Bengaluru): 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಐವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
545 ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಸಿಎನ್ ಶಶಿಧರ್, ದಿಲೀಪ್ ಕುಮಾರ್, ಸೂರ್ಯನಾರಾಯಣ, ರಘುವೀರ್ ಹಾಗೂ ನವೀನ್ ಪ್ರಸಾದ್ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಹೈಕೋರ್ಟ್ ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ರವರು ವಿಚಾರಣೆ ನಡೆಸಿದ ನಂತರ ಐವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.