ಮನೆ ಕಾನೂನು ಪಿಎಸ್‌ಐಗೆ ಚಾರ್ಜ್‌ಶೀಟ್ ಸಲ್ಲಿಸಲು ಅರ್ಹತೆ ಇದೆ: ಹೈಕೋರ್ಟ್

ಪಿಎಸ್‌ಐಗೆ ಚಾರ್ಜ್‌ಶೀಟ್ ಸಲ್ಲಿಸಲು ಅರ್ಹತೆ ಇದೆ: ಹೈಕೋರ್ಟ್

0

ಬೆಂಗಳೂರು(Bengaluru): ಪ್ರಕರಣದ ತನಿಖೆ ಮತ್ತು ಆರೋಪಪಟ್ಟಿ ಸಲ್ಲಿಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್‌ಐ) ಅವರಿಗೆ ಅಧಿಕಾರವಿದೆ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್  ಆರೋಪಿಯ ಅರ್ಜಿಯನ್ನು ವಜಾಗೊಳಿಸಿದೆ.

ಮಹಿಳೆ, ಆಕೆಯ ಮೂವರು ಮಕ್ಕಳು ಮತ್ತು ಮೊಮ್ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಬೈದರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. 

ಅಸಮರ್ಥ ಅಧಿಕಾರಿಯಾಗಿರುವ ಪಿಎಸ್ ಐ ಸಲ್ಲಿಸಿರುವ ಆರೋಪಪಟ್ಟಿ ಕಾನೂನು ಪ್ರಕಾರ ಸಮರ್ಥನೀಯವಲ್ಲ ಎಂದು ಅರ್ಜಿದಾರರ ಪರ ಹಿರಿಯ ವಕೀಲರು ವಾದಿಸಿದ್ದರು.

ಮತ್ತೊಂದೆಡೆ, ಸೂಕ್ತ ತನಿಖೆಯ ನಂತರ ಸಬ್ ಇನ್ಸ್‌ಪೆಕ್ಟರ್ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಯಾವುದೇ ಲೋಪವಿಲ್ಲ. ಆದ್ದರಿಂದ ಆ ನೆಲೆಯಲ್ಲಿ ಅರ್ಜಿದಾರರು ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಪಡಿಸುವ ಅರ್ಹತೆಯನ್ನು ಹೊಂದಿಲ್ಲ ಎಂದು ಆರೋಪಿ ನಂ.3 ರ ಇಎಸ್ ಪ್ರವೀಣ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಮೂರ್ತಿ ಕೆ.ನಟರಾಜನ್ ಹೇಳಿದರು.