ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದ ಬೆನ್ನೆಲ್ಲೇ ಇದೀಗ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರ ತಿಳಿಸಿದೆ.
ರಾಜ್ಯ ಸರ್ಕಾರದ ಸಿಎಸ್ರಿಂದ ಪ್ರಕರಣದ ಬಗ್ಗೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪ ಮಾಡಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು. ಸದ್ಯ ಸಚಿವೆ ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚಿಸಿದೆ.
ಯಾದಗಿರಿ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆಯನ್ನ ಚುರುಕುಗೊಳಿದ್ದಾರೆ. ತನಿಖೆ ಜವಾಬ್ದಾರಿಯನ್ನ ತೆಗೆದುಕೊಂಡ ಆರು ದಿನಗಳ ಸಿಐಡಿ ಎಸ್ಪಿ ಎಂಟ್ರಿ ಕೊಟ್ಟಿದ್ದರು. ಪರಶುರಾಮ ಕುಟುಂಬಸ್ಥರನ್ನ ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.
ಯಾದಗಿರಿ ನಗರ ಠಾಣೆಯಿಂದ ಸೈಬರ್ ಠಾಣೆಗೆ ವರ್ಗಾವಣೆ ಆಗಿದ್ದ ಪಿಎಸ್ಐ ಪರಶುರಾಮ ಸಾವಾಗಿ ಹಲವು ದಿನಗಳು ಕಳೆದಿವೆ. ಸಾವಾಗಿ ಮಾರನೇ ದಿನವೇ ಕೇಸ್ನ್ನ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಕೇಸ್ನ್ನ ತನಿಖೆಯ ಜವಾಬ್ದಾರಿ ವಹಿಸಿಕೊಂಡ ಮಾರನೇ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಆಗಮಿಸಿದ ಯಾದಗಿರಿ ಡಿವೈಎಸ್ಪಿ ಕಚೇರಿಯಲ್ಲಿ ಸಾಕಷ್ಟು ಮಾಹಿತಿಯನ್ನ ಕಲೆ ಹಾಕಿದ್ದರು.