ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಏಕ ಸದಸ್ಯತ್ವ ಸಮಿತಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಹೇಳಿದರು.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಂಗ ತನಿಖೆ ಆಗಬೇಕು ಎಂದು ಹಿಂದೆ ನಾವೇ ಹೇಳಿದ್ದೇವು. ಸತ್ಯಾಸತ್ಯತೆಗಳನ್ನು ಹೊರಗೆ ತರಬೇಕು ಎಂದು ಕೊಟ್ಟಿದ್ದೇವೆ ಎಂದು ತನಿಖೆ ಬೇರೆ ಮಾಡುತ್ತೇವೆ, ನೇಮಕಾತಿಯ ಪ್ರಕ್ರಿಯೆ ಬೇರೆ ಮಾಡುತ್ತೇವೆ. ಅದಕ್ಕೂ ಇದಕ್ಕೂ ತಾಳೆ ಮಾಡಲು ಹೋಗಲ್ಲ. ಅದನ್ನು ಟೈಅಪ್ ಮಾಡಿಕೊಂಡರೆ ನೇಮಕಾತಿ ಮಾಡಲು ಆಗಲ್ಲ ಎಂದರು.
ಇನ್ನೊಂದು ನೇಮಕಾತಿ ಆಗಬೇಕು. 400 ಹುದ್ದೆಗಳು ಖಾಲಿ ಇವೆ. ಅವುಗಳನ್ನು ನೇಮಕ ಮಾಡಬೇಕೆಂದರೂ ಈ ಪ್ರಕರಣ ಇತ್ಯರ್ಥ ಆಗಬೇಕು ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ವಿಚಾರವಾಗಿ ಮಾತನಾಡಿದ ಪರಮೇಶ್ವರ ಅವರ ಇಲಾಖೆ, ನಮ್ಮ ಇಲಾಖೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದೇವೆ. ಇಲಾಖೆಗಳ ಮಧ್ಯ ಸಮನ್ವಯ ಇರಬೇಕಲ್ವಾ. ಅದಕ್ಕೆ ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.