ಮನೆ ಅಪರಾಧ ಪಿಎಸ್ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್  ವಶಕ್ಕೆ

ಪಿಎಸ್ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್  ವಶಕ್ಕೆ

0

ಬೆಂಗಳೂರು(Bengaluru): ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಎಡಿಜಿಪಿ ಅಮೃತ್ ಪೌಲ್ ಅವರಿಗೆ ನಾಲ್ಕನೇ ಬಾರಿ ನೋಟಿಸ್ ನೀಡಲಾಗಿದ್ದು, ಇಂದು ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಬೆಳಿಗ್ಗೆ ವಿಚಾರಣೆಗೆ ಬಂದಿದ್ದ ಅಮ್ರಿತ್ ಪೌಲ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಸುದೀರ್ಘ ವಿಚಾರಣೆ ಬಳಿಕ ಅವರನ್ನು ಬಂಧಿ ಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿರುವ ಅಮ್ರಿತ್ ಪೌಲ್, ಈ ಹಿಂದೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. 545 ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಡಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು ಎಂದು ಸಿಐಡಿ‌ ಮೂಲಗಳು ಹೇಳಿವೆ.

ಆರೋಪಿಗಳ ವಿಚಾರಣೆ ವೇಳೆ ದೊರೆತ ಪುರಾವೆಗಳ ಆಧಾರದಲ್ಲಿ ಅಮ್ರಿತ್ ಪೌಲ್ ಅವರನ್ನು ವಿಚಾರಣೆಗೆ ಕರೆಸಲಾಗಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದೂ ತಿಳಿಸಿವೆ.