ಬೆಂಗಳೂರು(Mysuru): ಪಿಎಸ್’ಐ 545 ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಇಲಾಖೆ ಬದ್ಧವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದ ಕಾರಣಕ್ಕೆ ಸರ್ಕಾರವು ನೇಮಕಾತಿ ಪ್ರಕ್ರಿಯೆ ರದ್ದು ಪಡಿಸಿತ್ತು. ಕೆಲವು ಅಭ್ಯರ್ಥಿಗಳು ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲರ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಸಲ್ಲಿಕೆ ಆಗಲಿದೆ. ಆರೋಪಿ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸ್ಮರ್ಧಾತ್ಮಕ ಪರೀಕ್ಷೆ ಅವಕಾಶ ಸಿಗದಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
Saval TV on YouTube