ಮನೆ ರಾಜ್ಯ ಪಿಎಸ್ಐ ನೇಮಕಾತಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್‌

ಪಿಎಸ್ಐ ನೇಮಕಾತಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್‌

0

ಬೆಂಗಳೂರು (Bengaluru)-ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (PSI Recruitment Scam) ನಡೆದಿದೆ ಎಂದು ಆರೋಪಿಸಿದ್ದ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಸಿಐಡಿ (CID) ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಮಾಹಿತಿಗಳನ್ನು ಏ.25ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗಿ ಸಾಕ್ಷಿಗಳನ್ನು ಒದಗಿಸುವಂತೆ ನೋಟಿಸ್‌ ಮೂಲಕ ಸೂಚಿಸಲಾಗಿದೆ.

ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್ ನಲ್ಲಿ 545 ಪಿಎಸ್ಐ(ಸಿವಿಲ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಸಿಐಡಿ ಬೆಂಗಳೂರಿನಲ್ಲಿ ತನಿಖೆ ಜಾರಿಯಲ್ಲಿರುತ್ತದೆ. ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ತಮ್ಮ ಬಳಿ ಸಾಕ್ಷ್ಯಾಧಾರಗಳಿರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿರುತ್ತೀರಿ. ಈ ಪ್ರಕರಣವು ಸೂಕ್ಷ್ಮ ತುಂಬಾ ಗಂಭೀರ ಪ್ರಕರಣವಾಗಿರುವುದರಿಂದ ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ತ್ವರಿತಗತಿಯಲ್ಲಿ ತನಿಖೆ ಮಾಡುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಸಾಕ್ಷಿಗಳನ್ನು ಒದಗಿಸುವಂತೆ ತಿಳಿಸಲಾಗಿದೆ.

ಸಿಐಡಿ ನೋಟಿಸ್ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಆದರೆ ವಿಚಾರಣೆಗೆ ತೆರಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಹಿಂದಿನ ಲೇಖನಐಪಿಎಲ್‌ ಟೂರ್ನಿ: ಫೈನಲ್‌- ಪ್ಲೇ-ಆಫ್ಸ್ರ್ ಪಂದ್ಯಗಳ ವೇಳಾಪಟ್ಟಿ ಪ್ರಕಟ
ಮುಂದಿನ ಲೇಖನರಾಜ್ಯ ಚಲನಚಿತ್ರ ಪ್ರಶಸ್ತಿ: ನಟಿ ಲಕ್ಷ್ಮಿಗೆ ಡಾ.ರಾಜಕುಮಾರ್, ಎಸ್.ನಾರಾಯಣ್‌ ಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರದಾನ