ಮನೆ ರಾಜ್ಯ ಪಿಎಸ್‌ ಐ ಅಕ್ರಮ ನೇಮಕಾತಿ: ಶಹಾಬಾದ್ ‌ನಗರಸಭೆ ಸಿಬ್ಬಂದಿ ಪೊಲೀಸರ ವಶಕ್ಕೆ

ಪಿಎಸ್‌ ಐ ಅಕ್ರಮ ನೇಮಕಾತಿ: ಶಹಾಬಾದ್ ‌ನಗರಸಭೆ ಸಿಬ್ಬಂದಿ ಪೊಲೀಸರ ವಶಕ್ಕೆ

0

ಕಲಬುರಗಿ (Kalaburgi)- ಪಿಎಸ್‌ ಐ ಅಕ್ರಮ ನೇಮಕಾತಿ (PSI Recruitment scam) ಅಕ್ರಮಕ್ಕೆ ಸಂಬಂಧಿಸಿದಂತೆ ಶಹಾಬಾದ್ ‌ನಗರಸಭೆ ಸಿಬ್ಬಂದಿ ಜ್ಯೋತಿ ಪಾಟೀಲ ಎಂಬವರನ್ನು ಸಿಐಡಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯಲ್ಲಿನ ಕೇಂದ್ರದಲ್ಲಿ ಪರೀಕ್ಷೆ ಬರೆದ ಸೇಡಂನ ಶಾಂತಿಬಾಯಿ ಬಸ್ಯನಾಯ್ಕ ಎಂಬುವವರಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳುವಲ್ಲಿ ಸಹಕರಿಸಿದ ಆರೋಪ‌ದ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿದೆ.

ಮುಖ್ಯಮಂತ್ರಿ ಅವರ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕೆಲ ಕಾಲ ಕೆಲಸ ಮಾಡಿ ಇತ್ತೀಚೆಗೆ ‌ಶಹಾಬಾದ್ ನಗರಸಭೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂದಿನ ಲೇಖನಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ
ಮುಂದಿನ ಲೇಖನಬೆಳಗಾವಿ ವಿಭಜನೆ ಕುರಿತು ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ