ಮನೆ ರಾಜಕೀಯ ಸಿಎಂ ಬೊಮ್ಮಾಯಿ ಸ್ವಾಗತಿಸಲು ಫ್ಲೆಕ್ಸ್ ಹಾಕಿದ ಪಿಎಸ್’ಐ ಹಗರಣ ಆರೋಪಿ: ಕಾಂಗ್ರೆಸ್ ಕಿಡಿ

ಸಿಎಂ ಬೊಮ್ಮಾಯಿ ಸ್ವಾಗತಿಸಲು ಫ್ಲೆಕ್ಸ್ ಹಾಕಿದ ಪಿಎಸ್’ಐ ಹಗರಣ ಆರೋಪಿ: ಕಾಂಗ್ರೆಸ್ ಕಿಡಿ

0

ನವದೆಹಲಿ: ಕಲಬುರಗಿಯಲ್ಲಿ ಆರ್.ಡಿ ಪಾಟೀಲ್, ಸಿಎಂ ಬೊಮ್ಮಾಯಿಗೆ ಸ್ವಾಗತಿಸುವ ಫ್ಲೆಕ್ಸ್ ಹಾಕಿದ್ದಾನೆ. ಈ ಮೂಲಕ ಆತನಿಗೆ ಬೊಮ್ಮಾಯಿ ಅವರ ಶ್ರೀರಕ್ಷೆ ಇದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಪಿಎಸ್’ಐ ನೇಮಕಾತಿ ಹಗರಣವನ್ನು ಪ್ರಸ್ತಾಪಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾನೆ. ಆತನಿಗೆ ಬಿಜೆಪಿ ಟಿಕೆಟ್ ನೀಡುವುದು ಖಚಿತವಿರಬಹುದು. ಆತ ಬಿಜೆಪಿಗರ ಹೆಸರು ಬಾಯಿ ಬಿಡದಿರುವುದಕ್ಕೆ ‘ಟಿಕೆಟ್’ ಉಡುಗೊರೆಯೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪಿಎಸ್‌’ಐ ಹಗರಣದ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ₹3 ಕೋಟಿ ಕೇಳಿದ್ದರು, ನಾನು ₹76 ಲಕ್ಷ ಕೊಟ್ಟಿದ್ದೇನೆ ಎಂದು ಆರ್.ಡಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾನೆ. ಪ್ರಾಮಾಣಿಕ, ಪಾರದರ್ಶಕ ತನಿಖೆ ಎಂದು ಡೈಲಾಗ್ ಹೊಡೆದಿದ್ದ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಪಾರದರ್ಶಕತೆ ಇದೇನಾ? ಸರ್ಕಾರದ ತನಿಖೆಯಲ್ಲಿ ಸತ್ಯ ಸಮಾಧಿಯಾಗುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಪಿಎಸ್‌’ಐ ಹಗರಣದ ಪಾರದರ್ಶಕತೆ ಹೇಗಿದೆ ಎಂದು ಹಗರಣದ ಆರೋಪಿಯಿಂದಲೇ ಬೆತ್ತಲಾಗಿದೆ. ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದಾಗ ಪ್ರಾಮಾಣಿಕ ತನಿಖೆ ನಡೆಯುತ್ತಿದೆ ಎಂಬ ಸೋಗಲಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಐಡಿ ಅಧಿಕಾರಿಗಳ ₹3 ಕೋಟಿ ಡೀಲಿಂಗ್ ಬಗ್ಗೆ ಈಗ ಮಾತಾಡುತ್ತಿಲ್ಲವೇಕೆ? ಎಂದು ಕಾಂಗ್ರೆಸ್ ಕುಟುಕಿದೆ.

ಹಿಂದಿನ ಲೇಖನರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಹೆಣ್ಣು ಮಕ್ಕಳಿಗೆ ಮೈಸೂರು ರೈಲು ವಸ್ತುಸಂಗ್ರಹಾಲಯದ ಆತಿಥ್ಯ
ಮುಂದಿನ ಲೇಖನಸೆಂಟ್ ಫಿಲೋಮಿನಾ ಕಾಲೇಜಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ