ಮನೆ ಅಪರಾಧ ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ

ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ

0

ಬೆಂಗಳೂರು(Bengaluru): ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (Police Sub-inspector) ಆತ್ಮಹತ್ಯೆಗೆ(Suicide) ಶರಣಾಗಿರುವ ಘಟನೆ ತಡರಾತ್ರಿ ಯಶವಂತಪುರ ಠಾಣಾ(Yashwantapura police station) ವ್ಯಾಪ್ತಿಯಲ್ಲಿ ನಡೆದಿದೆ.

ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯ ಸುದರ್ಶನ್ ಶೆಟ್ಟಿ (45) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಸಬ್ ಇನ್ಸ್‌ಪೆಕ್ಟರ್ .

ನಿವೃತ್ತ ಯೋಧನಾಗಿದ್ದ ಸುದರ್ಶನ್ ಶೆಟ್ಟಿ, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಕುಡಿತದ ಚಟಕ್ಕೆ ಒಳಗಾಗಿದ್ದ ಅವರನ್ನು ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ ಬಳಿಕ ಮದ್ಯ ವ್ಯಸನ ಬಿಟ್ಟಿದ್ದರು.

ಪ್ರಧಾನಿ ಮೋದಿಯವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ತಮಗೆ ಆರೋಗ್ಯದ ಸಮಸ್ಯೆ ಇರುವುದರಿಂದ ಕರ್ತವ್ಯಕ್ಕೆ ಹಾಜರಾಗದೆ  ತಮ್ಮ ಮನೆಯಲ್ಲಿಯೇ ಉಳಿದಿದ್ದರು. ಹೆಚ್ಚು ಹೊತ್ತು ಕಳೆದರು ತಮ್ಮ ಕೊಠಡಿಯಿಂದ ಹೊರಬಾರದಿದ್ದಾಗ ಮನೆಯವರು ಗಮನಿಸುವಷ್ಟರಲ್ಲಿ ಸಾವಿಗೀಡಾಗಿದ್ದರು.

ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಯೋಗ ದಿನ:  ಹಿಂದಿನ ಜಿಲ್ಲಾಧಿಕಾರಿಗಳಾದ ರಣದೀಪ್, ಅಭಿರಾಮ್ ಜಿ ಶಂಕರ್ ಸ್ಮರಿಸಿದ ಸಂಸದ ಪ್ರತಾಪ್ ಸಿಂಹ
ಮುಂದಿನ ಲೇಖನಅಗ್ನಿಪಥ್ ಪ್ರತಿಭಟನೆ: ಅಗ್ನಿವೀರರಿಗೆ ಉದ್ಯೋಗದ ಆಫರ್ ನೀಡಿದ ಆನಂದ್ ಮಹೀಂದ್ರ