ಮನೆ ರಾಜ್ಯ ಪಿಯು ತರಗತಿಗಳು ಇಂದಿನಿಂದ ಆರಂಭ: ಸಮವಸ್ತ್ರ ಕಡ್ಡಾಯಗೊಳಿಸಿ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ

ಪಿಯು ತರಗತಿಗಳು ಇಂದಿನಿಂದ ಆರಂಭ: ಸಮವಸ್ತ್ರ ಕಡ್ಡಾಯಗೊಳಿಸಿ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ

0

ಬೆಂಗಳೂರು (Bengaluru)- 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಇಂದಿನಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರ ಧರಿಸುವುದು ಕಡ್ಡಾಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಹಿಜಾಬ್ ವಿವಾದದಂಥ ಘಟನೆ ಮರುಕಳಿಸದಂತೆ ಆರಂಭದಿಂದಲೇ ಎಚ್ಚರಿಕೆ ವಹಿಸಲು ಇಲಾಖೆ ಮುಂದಾಗಿದೆ. ಒಂದು ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಯಾವುದೇ ಸಮವಸ್ತ್ರ ಸೂಚಿಸದಿದ್ದರೆ, ಸಮಾನತೆ ಮತ್ತು ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಪದವಿ ಪೂರ್ವ ತರಗತಿಗೆ ಜೂನ್ 1ರಿಂದ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ದಂಡ ಶುಲ್ಕವಿಲ್ಲದೆ ದಾಖಲಾತಿ ಪಡೆಯಲು ಜೂನ್ 15 ಕೊನೆಯ ದಿನ. ಬೆಳಿಗ್ಗೆ 9.30ರಿಂದ 3.30ರವರೆಗೆ ಅಥವಾ 10.30ರಿಂದ 4.30ರವರೆಗೆ ತರಗತಿಗಳನ್ನು ನಡೆಸಬೇಕು ಎಂದೂ ಇಲಾಖೆ ಸೂಚಿಸಿದೆ.

ಜೂನ್ 9ರಿಂದ ಸೆ.30ರವರೆಗೆ ಶೈಕ್ಷಣಿಕ ವರ್ಷದ ಮೊದಲ ಅವಧಿ ನಡೆಯಲಿದೆ. ಅ. 13ರಿಂದ 2023ರ ಮಾರ್ಚ್‌ 31ರವರೆಗೆ ಎರಡನೇ ಅವಧಿ. ಅ. 1ರಿಂದ 12ರವೆರೆಗೆ ಮಧ್ಯಂತರ ರಜೆ ಇದ್ದು, 2023 ಏಪ್ರಿಲ್ 1ರಿಂದ ಬೇಸಿಗೆ ರಜೆ ನಿಗದಿಪಡಿಸಲಾಗಿದೆ.

ಹಿಂದಿನ ಲೇಖನಜೂನ್‌ 9 ರ ಹವಾಮಾನ ವರದಿ
ಮುಂದಿನ ಲೇಖನಅರ್ನೇಶ್ ಕುಮಾರ್ ಮಾರ್ಗಸೂಚಿ ಉಲ್ಲಂಘನೆ: ನ್ಯಾಯಾಂಗ ನಿಂದನೆ ಆರೋಪದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದ ತೆಲಂಗಾಣ ಹೈಕೋರ್ಟ್