ಮನೆ ರಾಜ್ಯ ಲೋಕೋಪಯೋಗಿ ಇಲಾಖೆ 500 ಕೋಟಿ ಹಗರಣ: ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಲೋಕೋಪಯೋಗಿ ಇಲಾಖೆ 500 ಕೋಟಿ ಹಗರಣ: ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

0

ಗದಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಇದೀಗ ಕಾಂಗ್ರೆಸ್​ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಮಾಜಿ ಸಚಿವ ಬಿ ಆರ್ ಯಾವಗಲ್ ದೂರಿನ ಮೇಲೆ ರಾಜ್ಯ ಸರ್ಕಾರವು,  ಪಿಡಬ್ಲ್ಯೂ ಗುಣ ಭರವಸೆ ವಲಯ ಬೆಂಗಳೂರ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಯಾವಗಲ್, ಕಳಪೆ ಕಾಮಗಾರಿ, ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಕೋಟ್ಯಾಂತರ ರೂಪಾಯಿ ಮೊತ್ತದ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಅಲ್ಲದೇ ಗುತ್ತಿಗೆದಾರರು. ನಕಲಿ ವರ್ಕ್ ಡನ್ ಸರ್ಟಿಫಿಕೇಟ್ ನೀಡಿ ಟೆಂಡರ್ ಪಡೆದುಕೊಂಡಿದ್ದಾರೆ. ಕಡಿಮೆ ಮೊತ್ತಕ್ಕೆ ಟೆಂಡರ್ ಹಾಕಿದವರನ್ನು ಬಿಟ್ಟು ಹೆಚ್ಚಿನ ದರಕ್ಕೆ ಹಾಕಿದವರಿಗೆ ಟೆಂಡರ್ ನಿಡಲಾಗಿದೆ. ಅಂದಿನ ಸಚಿವ ಸಿ ಸಿ ಪಾಟೀಲ್ ತಮಗೆ ಬೇಕಾದವರಿಗೆ ಕೆಲಸ ಕೊಡಿಸಿದ್ದಾರೆ ಎಂದು ಗಂಭೀರ ಆರೋಪಗಳನ್ನು ಮಾಡಿದರು.

ಮಾಜಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ಈ 500 ಕೋಟಿ ರೂ. ಹಗರಣದ ರೂವಾರಿಯಾಗಿದ್ದಾರೆ. ಇದೇ ಅಕ್ಟೋಬರ್ 11, 12 ರಂದು ತನಿಖಾ ತಂಡ ನರಗುಂದ ಕ್ಷೇತ್ರಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.