ಮೈಸೂರು : ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ.
ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆ ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಹಲ್ಲೆ ಮಾಡಿದ್ದಾನೆ.
ಸೋದರ ಮಾವ ಸೋಮಣ್ಣನ ಆಶ್ರಯದಲ್ಲಿ ಬೆಳೆಯುತ್ತಿರುವ ಪೂರ್ಣಿಮಾ, ಓದಬಾರದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಾರದು ಎಂದು ಹಲ್ಲೆ ಮಾಡಿದ್ದಾರೆ. ಯುವತಿ ಪೂರ್ಣಿಮಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಣ್ಣ ಸೇರಿ 7 ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.















