ಮನೆ ಅಪರಾಧ ಇ.ಡಿ ಅಧಿಕಾರಿಗಳಿಂದ ಪಂಜಾಬ್ ಸಿಎಂ ಸೋದರಳಿಯ ಬಂಧನ

ಇ.ಡಿ ಅಧಿಕಾರಿಗಳಿಂದ ಪಂಜಾಬ್ ಸಿಎಂ ಸೋದರಳಿಯ ಬಂಧನ

0

ಪಂಜಾಬ್:  ಪಂಜಾಬ್ ಚುನಾವಣೆ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಛನ್ನಿಗೆ ಇಡಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಸಿಎಂ ಸೋದರಳಿಯ ಭೂಪಿಂದರ್ ಸಿಂಗ್ ಹನಿಯನ್ನು ತಡರಾತ್ರಿ ಬಂಧಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಸಂಬಂಧಿತ ಕೇಸ್​​ನಲ್ಲಿ ಭೂಪೇಂದ್ರ ಸಿಂಗ್​ ಮನೆ, ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ನಿನ್ನೆ ಸಂಜೆ ಅವರನ್ನು ಬಂಧಿಸಿದ್ದು, ಇಂದು ಸಿಬಿಐ ಕೋರ್ಟ್​ಗೆ ಹಾಜರುಪಡಿಸಲಿದೆ.

ಪಂಜಾಬ್ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ಇಂಥದ್ದೊಂದು ಬೆಳವಣಿಗೆ ತುಂಬ ಮಹತ್ವದ್ದೆನಿಸಿದೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಇ.ಡಿ. ಕಳೆದ ತಿಂಗಳು ಪಂಜಾಬ್​ನ ವಿವಿಧೆಡೆ ರೇಡ್​ ಮಾಡಿ, ಸುಮಾರು 10 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿದ್ದು, ಅದರಲ್ಲಿ 8 ಕೋಟಿ ರೂಪಾಯಿ ಚರಣಜಿತ್​ ಸಿಂಗ್​ ಛನ್ನಿಯವರಿಗೆ ಸೇರಿದ್ದಾಗಿದೆ.

ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಈ ಘಟನೆ ದೊಡ್ಡ ಹಿನ್ನಡೆಯಾಗಿದೆ.

ಹಿಂದಿನ ಲೇಖನಕೊರೋನಾ: ದೇಶದಲ್ಲಿಂದು 1.49 ಲಕ್ಷ ಹೊಸ ಕೇಸ್ ಪತ್ತೆ
ಮುಂದಿನ ಲೇಖನಇಂದಿನ ನಿಮ್ಮ ದಿನ ಭವಿಷ್ಯ