ಪುಂಜಾಲಕಟ್ಟೆ: ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ (ಆ.20ರಂದು) ಸಂಭವಿಸಿದೆ.
ಇಲ್ಲಿನ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.
ಆತ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಆತ ಉಜಿರೆಯ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದು, ಕಾಲೇಜಿನಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Saval TV on YouTube