ಮನೆ ಅಪರಾಧ ಪುತ್ತೂರು: ಯುವತಿಗೆ ಚೂರಿ ಇರಿದು ವ್ಯಕ್ತಿ ಪರಾರಿ

ಪುತ್ತೂರು: ಯುವತಿಗೆ ಚೂರಿ ಇರಿದು ವ್ಯಕ್ತಿ ಪರಾರಿ

0

ಪುತ್ತೂರು: ವ್ಯಕ್ತಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಇಲ್ಲಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಆ.24ರ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗಿದೆ.

ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ ಯುವಕನೊಬ್ಬ ಚೂರಿಯಿಂದ ಇರಿದಿದ್ದಾನೆ.

ಗಾಯಾಳು ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದು, ಯುವತಿಯ ಸ್ಧಿತಿ ಚಿಂತಾಜನಕವಾಗಿದೆ. ಯುವತಿ ಸರಕಾರಿ ಬಸ್‌ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಬಂಟ್ವಾಳ ತಾಲೂಕಿನ ಸರಪಾಡಿ ಮೂಲದ ಯುವಕ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ.