ಮನೆ ಅಪರಾಧ ಕ್ಷುಲ್ಲಕ ಕಾರಣಕ್ಕೆ ಜಗಳ: ತಾಯಿ, ಮಗ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳ: ತಾಯಿ, ಮಗ ಆತ್ಮಹತ್ಯೆ

0

ರಾಮನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿಕೊಂಡ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್’​ನಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ.

ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇದರಿಂದ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಐಜೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.