ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಮತ್ತು ಮೌಲ್ಯಮಾಪನದಿಂದ ಸೈಂಟಿಸ್ಟ್ ಬಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 17 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್ಲೈನ್ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 24 ಅಕ್ಟೋಬರ್ ಆಗಿದೆ.
ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ:ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ , ಮತ್ತು ಒಬಿಸಿ ಪುರುಷ ಅಭ್ಯರ್ಥಿಗಳು: 100 ರೂ.
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ವಿಷಯದ ನಿರ್ದಿಷ್ಟ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಸೆಪ್ಟೆಂಬರ್ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಅಕ್ಟೋಬರ್ 2022
ಅಧಿಕೃತ ವೆಬ್ಸೈಟ್: rac.gov.in
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ
ಅರ್ಜಿ ಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ.