ಮೆಲ್ಬೋರ್ನ್: ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಅವರ 21ನೇ ಗ್ರ್ಯಾಂಡ್ ಸ್ಲಾಮ್ ಗೆಲ್ಲುವ ಮೂಲಕ ಸ್ಪೇನ್ ನ ದಿಗ್ಗಜ ಟೆನಿಸ್ ತಾರೆ ರಾಫೆಲ್ ನಡಾಲ್ ಇತಿಹಾಸ ಸೃಷ್ಟಿಸಿದ್ದಾರೆ.
ಈ ಮೂಲಕ ನಡಾಲ್ ಪುರುಷರ ಸಿಂಗಲ್ಸ್ ನಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆದ್ದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ನಡಾಲ್ ರಷ್ಯಾದ ಡೇನಿಯಲ್ ಮೆಡ್ವೆಡೆನ್ ಅವರನ್ನು 2-6 6-7(5) 6-4 6-4 7-5 ಸೆಟ್ ಗಳಿಂದ ಸೋಲಿಸಿ ಎರಡನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.