ಮನೆ ರಾಷ್ಟ್ರೀಯ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಪಟ್ಟು: ಕಲಾಪ ಮುಂದೂಡಿಕೆ

ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಪಟ್ಟು: ಕಲಾಪ ಮುಂದೂಡಿಕೆ

0

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬ್ರಿಟನ್‌ ಪ್ರವಾಸದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾಡಿರುವ ಟೀಕೆ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಮಂಗಳವಾರವೂ ತೀವ್ರ ಕೋಲಾಹಲ ಎಬ್ಬಿಸಿದ್ದು, ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು.

ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ಕಲ್ಪಿಸುತ್ತದ್ದಂತೆ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದವು. ಈ ನಡುವೆ ಬಿಜೆಪಿ ಸದಸ್ಯರು ರಾಹುಲ್‌ ಗಾಂಧಿ ಕ್ಷಮೆಯಾಚನೆ ಮಾಡಬೇಕು ಎಂದು ಪಟ್ಟು ಹಿಡಿದವು. ಇದರಿಂದ ಉಭಯ ಪಕ್ಷಗಳ ನಡುವೆ ವಾಕ್ಸಮರ ನಡೆದಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು.

ಬಜೆಟ್‌ ಅಧಿವೇಶನದ ಎರಡನೇ ಹಂತದ ಚರ್ಚೆ ಸೋಮವಾರ ಆರಂಭವಾಯಿತು. ರಾಹುಲ್‌ ಅವರ ಇತ್ತೀಚಿನ ಲಂಡನ್‌ ಭಾಷಣವು ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದರಿಂದ ಬಿಜೆಪಿ ಸದಸ್ಯರು ರಾಹುಲ್‌ ಕ್ಷಮೆಯಾಚನೆಗೆ ಪಟ್ಟು ಹಿಡಿದರು.

ಇದರಿಂದ ಕಾಂಗ್ರೆಸ್‌ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಸದನವನ್ನು ಮಂಗಳವಾರ ಮುಂದೂಡಲಾಗಿತ್ತು.ಇಂದು ಸದನ ಆರಂಭವಾಗುತ್ತಿದ್ದಂತೆ ಇದೇ ವಿಷಯವಾಗಿ ಉಭಯ ಪಕ್ಷಗಳು ಗದ್ದಲ ಮಾಡಿದ್ದರಿಂದ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ಹಿಂದಿನ ಲೇಖನಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ: ಮೊದಲ ದಿನವೇ ತಾಂತ್ರಿಕ ಸಮಸ್ಯೆ
ಮುಂದಿನ ಲೇಖನರಾಮನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾಪವಿದೆ: ಡಿ.ಕೆ ಶಿವಕುಮಾರ್