ನವದೆಹಲಿ : ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು (ಶನಿವಾರ) ಭೇಟಿಯಾಗಿದ್ದಾರೆ. ಇಂದು ಸಿಎಂ ಹಾಗೂ ಡಿಸಿಎಂ ಪ್ರತ್ಯೇಕ ಭೇಟಿಯು ಕುತೂಹಲ ಮೂಡಿಸಿದೆ.
ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಭೇಟಿಯಾಗಿ ಸಿಎಂ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಬಿಹಾರದ ಫಲಿತಾಂಶ ಹಾಗೂ ಕರ್ನಾಟಕದ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ನಾಯಕರು ಚರ್ಚಿಸಿದ್ದಾರೆ.
ಸಂಪುಟ ಪುನಾರಚನೆ ಪ್ರಸ್ತಾಪವನ್ನು ಸಿಎಂ ಇಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ. ಡಿಸೆಂಬರ್ಗೂ ಮುನ್ನ ಸಂಪುಟ ಪುನಾರಚನೆಗೆ ಸಿಎಂ ಕ್ಲೈಮ್ ಮಾಡಿದ್ದಾರೆಂದು ತಿಳಿದುಬಂದಿದೆ.
ಬಿಹಾರದ ಚುನಾವಣೆ ಸೋಲಿನ ಬಗ್ಗೆ ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತೆಲಂಗಾಣದ ಸಿಎಂ ಜತೆ ಚರ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.















