ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿ ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು ಎಂದು ಪಕ್ಷ ತಿಳಿಸಿದೆ.
ವಿಡಿಯೊವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಜನನಾಯಕ ರಾಹುಲ್ ಗಾಂಧಿ ಜಿ ಟ್ರಕ್ ಡ್ರೈವರ್‌ಗಳ ಸಮಸ್ಯೆಗಳನ್ನು ತಿಳಿದುಕೊಳ್ಳಲು ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ರಸ್ತೆಗಳಲ್ಲಿ ಸುಮಾರು 90 ಲಕ್ಷ ಟ್ರಕ್ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಮಸ್ಯೆಗಳಿವೆ. ರಾಹುಲ್ ಜೀ ಅವರ ಮನ್ ಕಿ ಬಾತ್ ಕೇಳುವ ಕೆಲಸವನ್ನು ಮಾಡಿದ್ದಾರೆ ಎಂದಿದ್ದಾರೆ.
ಟ್ರಕ್ ಚಾಲಕರ ನಡುವೆ ಗಾಂಧಿ ಕುಳಿತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ ಕಾಂಗ್ರೆಸ್, “ನಿಮ್ಮ ಮಧ್ಯೆ ನಿಮ್ಮ ರಾಹುಲ್ ಗಾಂಧಿ” ಎಂದು ಬರೆದಿದೆ.
ಈ ತಿಂಗಳ ಆರಂಭದಲ್ಲಿ, ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ರಾಹುಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಬಿಎಂಟಿಸಿ ಬಸ್ ನೊಳಗೆ ಕುಳಿತು ಅವರು ಮಹಿಳಾ ಪ್ರಯಾಣಿಕರಲ್ಲಿಯೂ ಮಾತನಾಡಿದ್ದರು.