ನವದೆಹಲಿ(New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿದ್ದಾರೆ.
ಊಟದ ವಿರಾಮದ ವೇಳೆ ಜಾರಿ ನಿರ್ದೇಶನಾಲಯ ಕಚೇರಿಯಿಂದ ತೆರಳಿರುವ ರಾಹುಲ್ ಗಾಂಧಿ, ಊಟದ ಬಳಿಕ ಮತ್ತೆ ವಿಚಾರಣೆಗೆ ಹಾಜರಾಗುತ್ತಿದ್ದು, ವಿಚಾರಣೆ ಮುಂದುವರಿಯಲಿದೆ ಎಂದು ಮೂಲಗಳು ಹೇಳಿವೆ.
ಈ ಮಧ್ಯೆ, ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿ ಹೊರಗೆ ಪ್ರತಿಭಟನೆ ನಡೆಸಿದರು.