ಮನೆ ರಾಜ್ಯ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

0

ಹುಬ್ಬಳ್ಳಿ (Hubballi): ನಗರದ ಬೆಂಗೇರಿಯಲ್ಲಿರುವ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ ಮಾಡಿ, ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜ ಉತ್ಪಾದನೆ ಮಾಡಲು ಅವಕಾಶ ನೀಡಿದ್ದು ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ರಾಹುಲ್ ಭೇಟಿ ನೀಡಿ, ಸಿಬ್ಬಂದಿ ಜೊತೆ ಚರ್ಚಿಸಿದರು.
ರಾಷ್ಟ್ರಧ್ವಜ ಉತ್ಪಾದನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ದೆಹಲಿಯ ಕೆಂಪುಕೋಟೆ ಹಾಗೂ ದೇಶದ ಪ್ರಮುಖ ಸ್ಥಳಗಳಲ್ಲಿ ಹಾರಾಡುವ ಧ್ವಜ ಇಲ್ಲಿಂದಲೇ ಉತ್ಪಾದನೆಯಾಗುತ್ತಿರುವುದಾಗಿ ಸಿಬ್ಬಂದಿ ತಿಳಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
‘ಸಾಂಪ್ರದಾಯಿಕವಾಗಿ ರಾಷ್ಟ್ರಧ್ವಜ ಖಾದಿಯಿಂದ ಮಾಡಲಾಗುತ್ತದೆ. ದೇಶದ ಏಕತೆಯನ್ನು ಪ್ರತಿನಿಧಿಸುವ ಖಾದಿಯಿಂದ ಮಾಡಿದ ರಾಷ್ಟ್ರಧ್ವಜದ ಪರವಾಗಿ ನಾವಿದ್ದೇವೆ’ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಸಮೀಂ ಅಹ್ಮದ್, ರಜತ್ ಉಳ್ಳಾಗಡ್ಡಿಮಠ ಇತರ ಮುಖಂಡರು ಇದ್ದರು.

ಹಿಂದಿನ ಲೇಖನಕಾಮನ್‌ ವೆಲ್ತ್‌ ಕ್ರೀಡಾಕೂಟ: ಕಂಚು ಗೆದ್ದ ಲವ್ ಪ್ರೀತ್ ಸಿಂಗ್
ಮುಂದಿನ ಲೇಖನನೆರೆ ಪರಿಹಾರ ಕಾರ್ಯಕ್ಕೆ 500 ಕೋಟಿ ರೂ. ಬಿಡುಗಡೆ: ಬಸವರಾಜ ಬೊಮ್ಮಾಯಿ