ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.
‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅಂಗವಾಗಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬುಧವಾರ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಮಾಲ್ದಾ ಜಿಲ್ಲೆಯಲ್ಲಿ ಭಾರೀ ಜನಸಂದಣಿಯು ರಾಹುಲ್ ಗಾಂಧಿಯವರ ಕಾರಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಘಟನೆಯಲ್ಲಿ ವಾಹನದ ಹಿಂಬದಿಯ ಕಿಟಕಿ ಗಾಜು ಜಖಂಗೊಂಡಿದೆ ಆದರೆ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ದೃಶ್ಯಗಳು ರಾಹುಲ್ ಗಾಂಧಿಯವರು ತಮ್ಮ ವಾಹನದಿಂದ ಹೊರಬಂದ ನಂತರ ಹಾನಿಗೊಳಗಾದ ಭಾಗವನ್ನು ಪರಿಶೀಲಿಸುತ್ತಿರುವುದನ್ನು ತೋರಿಸಿದೆ. ಯಾತ್ರೆಯು ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ದಾಳಿ ನಡೆದಿದೆ.