ರಾಯಚೂರು, ಫೆಬ್ರವರಿ 6: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.
ಸದ್ಯ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಶಿವನಗೌಡ ಹಾಗೂ ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ನಡೆದಿದ್ದೇನು?
ಶಾಲೆಯಿಂದ ಮನೆಗೆ ಕರೆದೊಯ್ಯುವ ನೆಪಮಾಡಿ ಆರೋಪಿ ಶಿವನಗೌಡ ಬಾಲಕಿಯನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.














