ರಾಯಚೂರು: ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನ ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ಅಸ್ವಸ್ಥರು ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರೇಕಲಮರಡಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಬೀಡುಬಿಟ್ಟಿದ್ದಾರೆ.
ಕಲುಷಿತ ನೀರಿನ ಕುರಿತಾಗಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ದುರ್ಘಟನೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.
ಸದ್ಯ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.














