ಮನೆ ಅಪರಾಧ ರಾಯಚೂರು: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ರಾಯಚೂರು: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

0

ರಾಯಚೂರು(Raichur): ಶಾಲೆಯಲ್ಲಿ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ (15) ಮೃತಪಟ್ಟ ಬಾಲಕ. ಮಲ್ಲಿಕಾರ್ಜನ ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಶಾಲೆಯ ಮಾಳಿಗೆಯ ಮೇಲೆ ಬಿದ್ದಿದ್ದ ಬಾಲನ್ನು ತರಲು ಹೋಗಿದ್ದ  ವೇಳೆ ಮಾಳಿಗೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಿಂದಿನ ಲೇಖನನಂಬಿಕೆಯಷ್ಟೆ ಸತ್ಯ – ಕವನ
ಮುಂದಿನ ಲೇಖನಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ