ಮನೆ ರಾಜ್ಯ ರಾಯಚೂರು: ವಿದ್ಯುತ್ ಅಡಚಣೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಮತದಾನ

ರಾಯಚೂರು: ವಿದ್ಯುತ್ ಅಡಚಣೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಮತದಾನ

0

ರಾಯಚೂರು: ಜಿಲ್ಲೆಯಲ್ಲಿ ರವಿವಾರ ರಾತ್ರಿಯಿಂದ ಭಾರೀ ಮಳೆ ಸುರಿದ ಪರಿಣಾಮ ವಿದ್ಯುತ್ ಅಡಚಣೆ ಉಂಟಾಗಿದ್ದು, ಟಾರ್ಚ್ ಬೆಳಕಲ್ಲಿ ಮತದಾನ ಮಾಡುತ್ತಿರುವ ಪ್ರಸಂಗ ನಡೆದಿದೆ.

Join Our Whatsapp Group

ನಗರದ ಎಪಿಎಂಸಿ ಕಚೇರಿಯಲ್ಲಿ ಈಶಾನ್ಯ ಪದವೀಧರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ನಡೆಯುತ್ತಿದ್ದು, ಬೆಳಕಿನ ವ್ಯವಸ್ಥೆ ಇಲ್ಲದಾಗಿದೆ. ನಿನ್ನೆ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದು, ವಿದ್ಯುತ್ ಅಡಚಣೆ ಉಂಟಾಗಿದೆ.

ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಮಾಡಲು ಬಂದಂತಹ ಮತದಾರರು ಟಾರ್ಚ್ ಬೆಳಕಿನಲ್ಲಿ ಮತದಾನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಧಿಕಾರಿಗಳು ಟಾರ್ಚ್ ಬೆಳಕು ಹಾಕಿ ಮತದಾರರಿಗೆ ಬೆಳಕು ಹಾಕುತ್ತಿರುವ ದೃಶ್ಯಾವಳಿಗಳು ಕಂಡು ಬಂದಿವೆ.

ಹಿಂದಿನ ಲೇಖನಟ್ರಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವು
ಮುಂದಿನ ಲೇಖನವಿದೇಶಕ್ಕೆ ತೆರಳಲು ವೀಸಾ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ