ಮಂಗಳೂರು(ದಕ್ಷಿಣ ಕನ್ನಡ): ಅಕ್ರಮ ಸಾರಾಯಿ ಘಟಕಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಮಂಗಳೂರಿನ ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯ ಗ್ರಾಮದ ಸಾಂತ್ಯಗುತ್ತು ಬಳಿ ನಡೆದಿದೆ.
ಸಾಂತ್ಯಗುತ್ತು ನಿವಾಸಿ ನಿತ್ಯಾನಂದ ಭಂಡಾರಿ ಎಂಬಾತನ ಮನೆಗೆ ದಾಳಿ ಮಾಡಿದ್ದು, ಕಿನ್ಯದಲ್ಲಿ ಸ್ಪಿರಿಟ್ ಮಾರಾಟ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದಾರೆ. ಕೇರಳಕ್ಕೆ ಸಾಗಾಟ ನಡೆಸಲು ಆರೋಪಿ ಈ ದಂಧೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Saval TV on YouTube