ಬೆಂಗಳೂರು (Bengaluru): ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 8 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಇಂದಿರಾನಗರ ಹಾಗೂ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಜೆ.ಪಿ.ನಗರ 5ನೇ ಹಂತದ ಎಸ್ಎನ್ಬಿಆರ್ ಕಾಂಪ್ಲೆಕ್ಸ್ನಲ್ಲಿರುವ ‘ರೂಹಿ ಥೈ’ ಹಾಗೂ ಇಂದಿರಾನಗರ 100 ಅಡಿ ರಸ್ತೆಯಲ್ಲಿರುವ ‘ಐರಾ’ ಸ್ಪಾ ಮೇಲೆ ದಾಳಿ ಮಾಡಿ ಮೂವರು ಕೆಲಸಗಾರರು ಹಾಗೂ ನಾಲ್ವರು ಗ್ರಾಹಕರನ್ನು ಬಂಧಿಸಲಾಗಿದೆ.
ಥಾಯ್ಲೆಂಡ್ ಹಾಗೂ ಇತರೆಡೆ ಮಹಿಳೆಯರಿಗೆ ಉದ್ಯೋಗದ ಆಮಿಷವೊಡ್ಡಿ ನಗರಕ್ಕೆ ಕರೆಸಿಕೊಳ್ಳಲಾಗಿತ್ತು. ಅವರನ್ನೇ ವೇಶ್ಯಾವಾಟಿಕೆಗೆ ತಳ್ಳಲಾಗಿತ್ತು. ಮಸಾಜ್ ಹೆಸರಿನಲ್ಲಿ ಗ್ರಾಹಕರನ್ನು ಆಹ್ವಾನಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.