ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಮತ್ತು ನಾಳೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆ.23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಆ.24ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
ಶನಿವಾರ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ನಲ್ಲಿ 6 ಸೆಂ.ಮೀ., ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ 4 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಜಗಲಬೆಟ್ನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.
Saval TV on YouTube