ಮನೆ ಹವಮಾನ ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

0

ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಡೆಯೂ ಚಳಿಯ ವಾತಾವರಣ ಮುಗಿದಿದ್ದು, ದಿನದಿಂದ ದಿನಕ್ಕೆ ಬಿಸಿಲ ಕಾವು ಹೆಚ್ಚಾಗಿದೆ. ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿತ್ತು.

ವಿದರ್ಭ ಮತ್ತು ಛತ್ತೀಸ್‌ ಗಢದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ, ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿಯೂ ಸಹ ಬಲವಾದ ಗಾಳಿಯೊಂದಿಗೆ ಮಳೆಯಾಗಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಹವಾಮಾನ ಬದಲಾಗುತ್ತಿದೆ.

ಕರ್ನಾಟಕದ ದಕ್ಷಿಣ ಕನ್ನಡ, ಬೀದರ್, ಧಾರವಾಡ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ.

ಎಚ್ ​ಎಎಲ್ ​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಇಸಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.